*ಡಿಪ್ಲೊಮಾ ವಿದ್ಯಾರ್ಥಿಗಳ ಪ್ರತಿಭಟನೆ *ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿ *ಯುಜಿಸಿಯ ಮಾರ್ಗಸೂಚಿಗಳನ್ನು ಅನುಸರಿಸಲು ಆಗ್ರಹ -ಎಐಡಿಎಸ್‌ಓ
ಬಳ್ಳಾರಿ: 1,3 ಮತ್ತು 5 ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿ, ಯುಜಿಸಿಯ ಮಾರ್ಗಸೂಚಿಗಳನ್ನು ಅನುಸರಿಸಲು ಆಗ್ರಹಿಸಿ ಇಂದು ಬಳ್ಳಾರಿಯ ಡಿಸಿ ಕಛೇರಿಯಲ್ಲಿ ಆವರಣದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಮಗೆ ಪರೀಕ್ಷೆಗಳನ್ನು ಎದುರಿಸಲು ಭಯವಿಲ್ಲ! ಆದರೆ ಕೋವಿಡ್ ಹಿನ್ನೆಲೆಯಲ್ಲಿ ಸಿಬಿಎಸ್‌ಇ, ಐಸಿಎಸ್‌ಸಿ, ಪಿಯು ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿದಂತೆ ಡಿಪ್ಲೊಮಾ ವಿದ್ಯಾರ್ಥಿಗಳ ಆಡ್ ಸೆಮೆಸ್ಟರ್ ಪರೀಕ್ಷೆಯನ್ನು ರದ್ದುಗೊಳಿಸಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ತಾಂತ್ರಕ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಎಐಡಿಎಸ್‌ಓ ನ ರಾಜ್ಯ ಸಮಿತಿ ಸದಸ್ಯರಾದ ರವಿಕಿರಣ್.ಜೆ.ಪಿ ರವರು ಮಾತನಾಡುತ್ತಾ “ರಾಜ್ಯದಲ್ಲಿ ಕೊರೋನ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿ, ಲಾಕ್ ಡೌನ್ ಆಗಿದ್ದ ಸಮಯದಲ್ಲಿ, ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸದೆಯ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್‌ಗೆ ಕಳುಹಿಸಲಾಯಿತು ಮತ್ತು ಕಳೆದ 2 ತಿಂಗಳಿನಿAದ ಆನ್ ಲೈನ್ ತರಗತಿಗಳು ಸಹ ನಡೆಯುತ್ತಿವೆ. ಸೆಮಿಸ್ಟರ್ ಪರೀಕ್ಷೆ ಕುರಿತು ಸರ್ಕಾರ ಯಾವುದೇ ನಿರ್ದಿಷ್ಟ ನಿರ್ಧಾರ ಕೈಗೊಂಡಿಲ್ಲವೆAದು ಹಾಗೂ ಈಗ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದೇ ಮುಖ್ಯ ಆದ್ಯತೆ ಎಂದು ಹೇಳಿದ್ದ ಸರ್ಕಾರ ಈಗ ದಿಡೀರನೆ ನಾವು ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಈಗ ಹಠಾತ್ತನೆ ಹಿಂದಿನ ಸೆಮಿಸ್ಟರಿನ ಪರೀಕ್ಷೆಯನ್ನು ಜುಲೈ ಕೊನೆಯ ವಾರದಿಂದ ಆಗಸ್ಟ್ ಮೊದಲ ವಾರದಲ್ಲಿ ಮುಗಿಸಿ ನಂತರ ಪ್ರಸ್ತುತ ಸೆಮಿಸ್ಟರ್ ಪರೀಕ್ಷೆಯನ್ನು ಮುಗಿಸುವುದು ವಿದ್ಯಾರ್ಥಿಗಳ ಮೇಲೆ ಅತೀವ ಒತ್ತಡ ಹೇರಿದಂತಾಗುತ್ತದೆ. ಅಲ್ಲದೆ ಡಿಪ್ಲೋಮಾ ವಿದ್ಯಾರ್ಥಿಗಳಲ್ಲಿ ಅನೇಕರಿಗೆ 18ವರ್ಷ ತುಂಬಿರದ ಹಿನ್ನಲೆಯಲ್ಲಿ ಲಸಿಕೆಯನ್ನೂ ಪಡೆಯವಂತಿಲ್ಲ. ಲಸಿಕೆ ಇಲ್ಲದೇ ವಿದ್ಯಾರ್ಥಿಗಳು ಆಫ್ ಲೈನ್ ತರಗತಿಗಳು/ಪರೀಕ್ಷೆಗೆ ಹಾಜರಾಗವುದು ಅಪಾಯಕಾರಿ. ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿದಂತೆ ಡಿಪ್ಲೋಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸದಿದ್ದಲ್ಲಿ ತಾರತಮ್ಯವಾಗುತ್ತದೆ. ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳು ಆಗ ಎರಡು ಸೆಮಿಸ್ಟರ್ ಪರೀಕ್ಷೆಗಳು ಮತ್ತು ಸಿಇಟಿ ಸೇರಿ ಮೂರು ಪರೀಕ್ಷೆಯನ್ನೂ ಬರೆಯಬೇಕಾಗುತ್ತದೆ..
ಈ ಬಗೆಗೆ ಎಐಡಿಎಸ್‌ಓ ರಾಜ್ಯ ಸಮಿತಿ ನಡೆಸಿದ ಬೃಹತ್ ಗೂಗಲ್ ಸಮೀಕ್ಷೆಯಲ್ಲಿ ರಾಜ್ಯದ 45 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶೇ. 90.1ರಷ್ಟು ವಿದ್ಯಾರ್ಥಿಗಳು ಅಂದರೆ, 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ಕೈ ಬೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಎಐಡಿಎಸ್‌ಓ ಅನೇಕ ಶಿಕ್ಷಣ ತಜ್ಞರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೂ ಸಹ ವ್ಯಾಪಕ ಚರ್ಚೆ ನಡೆಸಿದೆ. ಇವರೆಲ್ಲರ ಅಭಿಪರಯವನ್ನು ನಮ್ಮ ಮನವಿ ಪತ್ರದಲ್ಲಿ ಕ್ರೋಢೀಕರಿಸಿ ತಾಂತ್ರಿಕ ಶಿಕ್ಷಣ ಇಲಾಖೆಯ ಅವಗಾಹನೆಗಾಗಿ ಸಲ್ಲಿಸುತ್ತಿದ್ದೇವೆ. ಅಲ್ಲದೇ ಯುಜಿಸಿಯ ಮಾರ್ಗಸೂಚಿಗಳನ್ನು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಕೆಲವು ತೀರ್ಪುಗಳನ್ನಾದರಿಸಿ ಹೊರಡಿಸಲಾಗಿದೆ
ಎಂದು ಯುಜಿಸಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆ ನಡೆಸುವುದು, ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ವಿದ್ಯಾರ್ಥಿ ವಿರೋಧಿಯಾಗುತ್ತದೆ! ಅಲ್ಲದೇ ಮಾರ್ಗಸೂಚಿಗಳನ್ನು ಎಐಸಿಟಿಇ ಗು ಅನ್ವಯವಾಗುತ್ತದೆ. ಹಾಗಾಗಿ ವಿಟಯು ಮತ್ತು ಡಿಟಿಇ ಸಹ ಈ ಮಾರ್ಗಸೂಚಿಗಳನ್ನು ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಅನುಸರಿಸಬೇಕೆಂದು” ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್‌ಓ ರಾಜ್ಯ ಸೆಕ್ರೆಟರಿಯಟ್ ಸದಸ್ಯರಾದ ಜೆ.ಸೌಮ್ಯ ಜಿಲ್ಲಾಧ್ಯಕ್ಷರಾದ ಗುರಳ್ಳಿ ರಾಜ, ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಕೆ.ಈರಣ್ಣ, ಎಂ.ಶಾAತಿ, ಕೆ.ಮಂಜುನಾಥ, ಅನುಪಮಾ, ಜೆ.ಪಿ.ರೇವಣಸಿದ್ದೇಶ್ವರ, ನಿಹಾರಿಕ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೇಡಿಕೆಗಳು
• ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಬಿಡಿ. ಪ್ರಸಕ್ತ ಸೆಮಿಸ್ಟರ್ ನ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಿ.
• ಸಿಬಿಎಸ್‌ಸಿ, ಐಸಿಎಸ್‌ಈ ಮತ್ತು ಪಿಯು ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿದಂತೆ ಡಿಪ್ಲೊಮಾ ವಿದ್ಯಾರ್ಥಿಗಳ ಆಡ್ ಸೆಮೆಸ್ಟರ್ ಪರೀಕ್ಷೆಯನ್ನು ರದ್ದುಗೊಳಿಸಿ. ಆಂತರಿಕ ಮೌಲ್ಯಮಾಪನ ಅಥವಾ ಇನ್ನಾವುದಾದರು ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯಮಾಪನ ಮಾಡಿ.
• ಶಿಕ್ಷಣ ತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಡನೆ ಪ್ರಜಾತಾಂತ್ರಿಕ ಚರ್ಚೆಗಳನ್ನು ನಡೆಸಿ. ಶೈಕ್ಷಣಕ ವೇಳಾಪಟ್ಟಿ, ಪರೀಕ್ಷೆ, ಮೌಲ್ಯಮಾಪನ ಇವುಗಳ ಬಗ್ಗೆ ಒಂದು ವೈಜ್ಞಾನಿಕ -ಪ್ರಜಾತಾಂತ್ರಿಕ ನೀತಿಯನ್ನು ರೂಪಿಸಿ.
• ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಲಸಿಕೆ ನೀಡುವ ಮುನ್ನ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಬೇಡಿ.
• ಯುಜಿಸಿ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನುಸರಿಸಿ!