ಬೆಳಗಾಯಿತು ವಾರ್ತೆ
ಕಂಪ್ಲಿ : ತಾಲೂಕಿನ ಎಮ್ಮಿಗನೂರು ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸರ್ ಎಂ ವಿಶ್ವೇಶ್ವರಯ್ಯನವರ ಜಯಂತಿಯನ್ನು ಇಂಜಿನಿಯರ್ಸ್ ಡೇ ಆಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ರಾಮಪ್ಪ ಎಸ್ ಮಾತನಾಡಿ ಸರ್ ಎಂ ವಿಶ್ವೇಶ್ವರಯ್ಯನವರು ಇಂಜಿನಿಯರಾಗಿ ಅಲ್ಲದೆ ಮೈಸೂರಿನ ದಿವಾನರಾಗಿ ಕರ್ನಾಟಕ ದೇಶ ಹಾಗೂ ಇಡಿ ವಿಶ್ವಕ್ಕೆ ರೈತರ ಕೃಷಿ ಕ್ಷೇತ್ರಕ್ಕೆ ಅವಶ್ಯಕ ವಾದಂತಹ ಅಣೆಕಟ್ಟುಗಳನ್ನು ಕಟ್ಟುವ ಮೂಲಕ ನೀರಾವರಿ ಕ್ಷೇತ್ರಕ್ಕೆ ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಬ್ಯಾಂಕ್ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಮುಖಾಂತರ ಕೈಗಾರಿಕಾ ಕ್ಷೇತ್ರಕ್ಕೆ ಕೊಡಗೆ ನೀಡಿ ಮಹಾನ್ ವ್ಯಕ್ತಿ ಎನಿಸಿಕೊಂಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳಾದ ಜಿ ಎರಿಸ್ವಾಮಿ ಪ್ರಭುಸ್ವಾಮಿ ಧನಂಜಯ ರೆಡ್ಡಿ ಲೋಕೇಶ್ ಮಕ್ಕಳು ಇತರರು ಇದ್ದರು.