ನವದೆಹಲಿ: ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ೬೩ ಮಂದಿಗೆ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
೨೦೦೨ರ ಗುಜರಾತ್ ಗಲಭೆ ಪ್ರಕರಣ ಸಂಬAಧ ಈ ಗಲಭೆಯಲ್ಲಿ ಹತರಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಪ್ರಧಾನಿ ನರೇಂದ್ರ ಮತ್ತು ಇತರ ೬೩ ಮಂದಿಗೆ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದರು. ಫೆಬ್ರವರಿ ೨೮, ೨೦೦೨ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಎಹ್ಸಾನ್ ಜಾಫ್ರಿ ಸಾವನ್ನಪ್ಪಿದ್ದರು.
೨೦೦೨ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಿಂಸಾಚಾರದಲ್ಲಿ ಹತರಾದ ಕಾಂಗ್ರೆಸ್ ಸಂಸದರೊಬ್ಬರ ಪತ್ನಿ ಸಲ್ಲಿಸಿರುವ ಮೇಲ್ಮನವಿ ಯಾವುದೇ ಅರ್ಹತೆ ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಗುಜರಾತ್ ಹೈಕೋರ್ಟ್ನ ಆದೇಶದ ವಿರುದ್ಧ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿತ್ತು.