ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಛಲವಾದಿ ಸಮುದಾಯದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಒಕ್ಕೂಟದಿಂದ ಸ್ಥಾಪನೆಯಾದ ಬಳ್ಳಾರಿ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ. 31ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೂಳಪ್ಪ ಬೆಳ್ಳೇಕಟ್ಟೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ತಿಂಗಳುಗಳಿಂದ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಇದೀಗ ಅದ್ದೂರಿಯಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿರುವ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ಉರಿಲಿಂಗ ಪೆದ್ದಿ ಮಠದ ಪರಮಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಚಿತ್ರದುರ್ಗದ ಛಲವಾದಿ ಮಹಾಮಠದ ಪರಮಪೂಜ್ಯ ಶ್ರೀ ಬಸವನಾಗಿದೇವ ಸ್ವಾಮೀಜಿ ಹಾಗೂ ಭಾರತೀಯ ಬೌದ್ಧ ಮಹಾಸಭಾ ಬಳ್ಳಾರಿಯ ಪೂಜ್ಯ ಶ್ರೀ ಕಮಲರತ್ನ ಭಂತೇಜಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.
ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ.ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ, ಸಚಿವ ಪ್ರಿಯಾಂಕ್ ಖರ್ಗೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಬಿ.ಝಡ್. ಜಮೀರ್ ಅಹಮದ್ ಖಾನ್, ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಸಂಸದ ಈ. ತುಕಾರಾಂ, ಶಾಸಕರಾದ ಬಿ. ನಾಗೇಂದ್ರ, ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್, ಬಿ.ಎಂ. ನಾಗರಾಜ್, ಅನ್ನಪೂರ್ಣ ತುಕಾರಾಂ ಹಾಗೂ ನಯನಾ ಮೋಟಮ್ಮ ಅವರು ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮವನ್ನು ಕರ್ನಾಟಕ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಹೆಚ್. ಸಿದ್ದಯ್ಯ ಐಎಎಸ್ (ನಿ), ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಐಎಎಸ್, ರಾಜ್ಯಾಧ್ಯಕ್ಷೆ ವಾಣಿ ಕೆ. ಶಿವರಾಮು, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಸೇರಿದಂತೆ ವಿವಿಧ ಗಣ್ಯರು ನೆರವೇರಿಸಲಿದ್ದಾರೆ ಎಂದರು.
ಇದೇ ವೇಳೆ ಸಮುದಾಯದ ನಿವೃತ್ತ ನೌಕರರಿಗೆ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಮಾಜಿ ಅಧ್ಯಕ್ಷ ಮಾನಯ್ಯ ಹಾಗೂ ಮಾಜಿ ರಾಜ್ಯಾಧ್ಯಕ್ಷ ಹೆಚ್.ಕೆ. ಬಸವರಾಜು ಅವರು ಗೌರವ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಡಾ. ಸಿ.ಹೆಚ್. ಸೋಮನಾಥ್, ಡಾ. ಸಿ. ಭರತ್ ಹಾಗೂ ಹನುಮಂತಪ್ಪ ಅವರು ಗೌರವ ಉಪಸ್ಥಿತಿ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೂಳಪ್ಪ ಬೆಳ್ಳೇಕಟ್ಟೆ ವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಿ. ನರಸಪ್ಪ, ಹನುಮಪ್ಪ, ಸೋಮನಾಥ್, ಸಿ. ಮಂಜುನಾಥ್, ಜೆ.ಎಸ್. ಶ್ರೀನಿವಾಸುಳು, ಹನುಮೇಶ್ ಕಟ್ಟೆಮಾನಿ, ಶಂಕರ್ ಹಾಗೂ ವಿಲಾಸ್ ಮನಕರ್ ಉಪಸ್ಥಿತರಿದ್ದರು.





