ಮೆಣಸಿನಕಾಯಿ ಬೆಳೆ ವಿಚಾರ ಸಂಕಿರಣ

0
186

ಬಳ್ಳಾರಿ: ರೈತರು ತಮ್ಮ ಬೆಳೆಗಳನ್ನು ಬೆಳೆಯುವಾಗ ಸೂಕ್ಷö್ಮತೆಯನ್ನು ಅರಿತು ಬೆಳೆಗಳನ್ನು ಬೆಳೆದರೆ ಅನುಕೂಲವಾಗುತ್ತದೆ. ಇಗಾಗಲೆ ಎಚ್‌ಎಲ್‌ಸಿ ಕಾಲುವೆಗೆ ನೀರು ಬಿಡಲಾಗುತ್ತಿದೆ. ಅದರಿಂದ ರೈತರು ವರ್ಷದಲ್ಲಿ ಎರಡು ಬೆಳೆಯನ್ನು ಬೆಳೆಯಬಹುದಾಗಿದೆ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದರು.
ನಗರದ ರಾಘವ ಕಲಾ ಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಇವರ ಸಹಯೋಗದೊಂದಿಗೆ ಆಯೋಜನೆ ಮಾಡಿದ ಮೆಣಸಿನಕಾಯಿ ಬೆಳೆ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಹೇಳಿದರು.
ನಮ್ಮ ಸರ್ಕಾರದ ಅವದಿಯಲ್ಲಿ ೨ ಎಕರೆ ಪಾಣಿ ಇರುವ ರೈತರ ಖಾತೆಗೆ ೨ ಸಾವಿರದಂತೆ ಹಣವನ್ನು ಹಾಕಲಾಗುತ್ತಿದೆ. ಇದರಿಂದ ರೈತರಿಗೆ ಅಲ್ಪಮಟ್ಟಿಗಾದರು ಸಹಾಯ ವಾಗಲಿದೆ ಎಂದು ಅವರು ಹೇಳಿದರು
ಈ ಸಂದರ್ಭದಲ್ಲಿ ಸಂಸರಾದ ವೈ. ದೇವೆಂದ್ರಪ್ಪ, ಸಂಸದರಾದ ಕರಡಿ ಸಂಗಣ್ಣ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಪಾಲಣ್ಣ ಸೇರಿದಂತೆ ರೈತರು ಭಾಗವಹಿಸಿದ್ದರು.

Previous articleಪ.ಜಾತಿ, ಪ.ಪಂಗಡ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Next articleಭೂಮಿ ಪೂಜೆ ನೆರವೇರಿಸಿದ ಶಾಸಕ

LEAVE A REPLY

Please enter your comment!
Please enter your name here