-0.8 C
New York
Thursday, March 30, 2023

Buy now

spot_img

ದೇಶದ ಅತಿದೊಡ್ಡ ‘ಐಕಿಯಾ’ ಮಳಿಗೆ ಇದೀಗ ನಮ್ಮ ಬೆಂಗಳೂರಿನಲ್ಲಿ“ಈ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ”: ಸಿಎಂ ಬೊಮ್ಮಾಯಿ

ಬೆಂಗಳೂರು: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ ೭೫ ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿಯೇ ಮೊದಲ ಮಳಿಗೆ ಪ್ರಾರಂಭಿಸಬೇಕೆAಬ ಉದ್ದೇಶ ಐಕಿಯಾ ಸಂಸ್ಥೆಗೆ ಇತ್ತು. ಆದರೆ ಸಹಕಾರ ದೊರೆಯಲಿಲ್ಲ. ನಂತರ ಬಹಳ ಕಷ್ಟಪಟ್ಟು ಸ್ಥಳ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಳಿಗೆ ಪ್ರಾರಂಭವಾದುದರಿAದ ಸ್ಥಳೀಯ ಕುಶಲಕರ್ಮಿಗಳಾದ, ಬಡಗಿಗಳು, ಶಿಲ್ಪಕಾರರು, ಉತ್ಪಾದಕರಿಗೆ ಅವಕಾಶ ದೊರೆಯುತ್ತದೆ. ಶೇ ೨೭ ರಷ್ಟು ಅವಕಾಶ ನೀಡಲಾಗುವುದು. ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಬೆಂಗಳೂರಿಗೆ ಆ ಸಾಮರ್ಥ್ಯವಿದೆ. ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,754FollowersFollow
0SubscribersSubscribe
- Advertisement -spot_img

Latest Articles