ಬೆಂಗಳೂರು: ಇಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ವಲಯದಲ್ಲಿ ಮುಂಚೂಣಿಯಲ್ಲಿರುವ ಕೊರಿಯಾ ಗಣರಾಜ್ಯ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಗಳ ನಡುವಣ ಬಾಂಧವ್ಯ ಬಲಗೊಳ್ಳುವುದರಿಂದ ಎರಡೂ ಕಡೆ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ತಮ್ಮನ್ನು sೆÃಟಿ ಮಾಡಿದ ಕೊರಿಯಾ ಗಣರಾಜ್ಯದ ರಾಯಭಾರಿ ಜೇ-ಬಾಕ್ ಚಾಂಗ್ (ಎಚಿe-boಞ ಅhಚಿಟಿg) ಅವರ ನೇತೃತ್ವದ ನಿಯೋಗದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯವು ಕೊರಿಯಾದೊಂದಿಗೆ ಹಲವು ದಶಕಗಳ ನಂಟು ಹೊಂದಿರುವುದು ಹೆಮ್ಮೆಯ ವಿಷಯ. ಕೊರಿಯಾ ಗಣರಾಜ್ಯವು ನೂತನ ತಂತ್ರಜ್ಞಾನಗಳ ಬಳಕೆ ಮಾಡಿಕೊಂಡು ಅತ್ಯುತ್ತಮ ಉತ್ಪನ್ನಗಳನ್ನು ತಯಾರಿಸುತ್ತಿರುವುದು ಶ್ಲಾಘನೀಯ. “ಭಾರತ ದೇಶ ಹಾಗೂ ಕರ್ನಾಟಕ ರಾಜ್ಯ ಇಂದು ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿವೆ. ಅತ್ಯುತ್ತಮ ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ಕೊರಿಯಾ ಕೈಜೋಡಿಸಿದಲ್ಲಿ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.