ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇಂದು ರೇಸ್‌ಕೋರ್ಸ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದರು. ನಗರದ ರೇಸ್‌ಕೋರ್ಸ್ ನಿವಾಸಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಹೂ ಗುಚ್ಛ ನೀಡಿ ಅವರನ್ನು ಸ್ವಾಗತಿಸಿದರು.
ರೇಸ್‌ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ರಾಜ್ಯದ ನೀರಾವರಿ ವಿಚಾರವಾಗಿ ಕೇಂದ್ರ ಸಚಿವ ಶೇಖಾವತ್ ಜೊತೆ ಸಿಎಂ ಚರ್ಚೆ ನಡೆಸಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಕೂಡ ಭಾಗಿಯಾಗಿದ್ದರು.