ಸಿಎಂಗೆ ಬಾಗಲಕೋಟೆ ಸೋಲಿನ ಭಯ ಇದೆ

ಬೆಳಗಾಯಿತು ವಾರ್ತೆ|www.belagayithu.in
ಬಾಗಲಕೋಟೆ: ಕಾಂಗ್ರೆಸ್​​ನ  ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ.
ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಮಾತನಾಡಿದ ರಾಮುಲು, ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು. ಈ ವೇಳೆ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್​ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles