ಬೆಂಗಳೂರು, ಆಗಸ್ಟ್ 23 (ಯುಎನ್ಐ) ಶಾಲಾ ವಿದ್ಯಾರ್ಥಿಗಳು ಕರೋನ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಹಿತವಚನ ಬೋಧಿಸಿದ್ದಾರೆ.
ಮಲ್ಲೇಶ್ವರದ ಕಾಲೇಜಿಗೆ ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರೊಂದಿಗೆ ಭೇಟಿ ನೀಡಿ , ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸಿ ಅವರು ಮಾತನಾಡಿದರು.
ಕೊರೋನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಮತ್ತು ತಜ್ಞರ ವರದಿ, ಶಿಫಾರಸ್ ಮೇರೆಗೆ ಶಾಲೆಗಳನ್ನು ತೆರೆಯಲಾಗುತ್ತಿದೆ ಆದ್ದರಿಂದ ಎಲ್ಲರೂ ಕರೋನ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಶಾಲೆಗಳು ಆರಂಭವಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಂತಸದ ಭಾವನೆ ಮೂಡುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದೂ ಮುಖ್ಯಮಂತ್ರಿ ಬೊಮ್ಮಾಯಿ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದರು.