ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಬೆಂಗಳೂರಲ್ಲಿ ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಎಲ್ಪಿಜಿ ಉತ್ಪಾದನೆ ಹೆಚ್ಚಿಸುವಂತೆ ಹಾಗೂ ಗೃಹ ಬಳಕೆಗೆ ಎಲ್ಪಿಜಿ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತೈಲ ಕಂಪನಿಗಳಿಗೆ ನಿರ್ದೇಶಿಸಿರುವ ಕೇಂದ್ರ ಪೆಟ್ರೋಲ್ ಹಾಗೂ ನೈಸರ್ಗಿಕ ಅನಿಲ ಇಲಾಖೆಯ ಪರಿಷ್ಕೃತ ಆದೇಶದಿಂದ ಬೆಂಗಳೂರಲ್ಲಿ ವಾಣಿಜ್ಯ ಎಲ್ಪಿಜಿ ಸರಬರಾಜಿನಲ್ಲಿ ಕೊರತೆ ಎದುರಾಗುತ್ತಿದೆ. ವಾಣಿಜ್ಯ ಎಲ್ಪಿಜಿ ಪಡೆಯುವಲ್ಲಿ ವ್ಯತ್ಯಯವಾಗುತ್ತಿರುವುದಾಗಿ ಅನೇಕ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಟನೆಗಳು ತಿಳಿಸಿದ್ದಾರೆ. ಒಂದು ವೇಳೆ ಸರಬರಾಜು ಪುನಸ್ಥಾಪಿಸದೇ ಇದ್ದರೆ ತಾತ್ಕಾಲಿಕವಾಗಿ ಹೋಟೆಲ್ಗಳನ್ನು ಮುಚ್ಚಬೇಕಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.





