ಜೂ.21 ರಂದು ಬಳ್ಳಾರಿಗೆ ಸಿಎಂ ಭೇಟಿ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ:ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.21 ರಂದು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳುವುದಾಗಿ ತಿಳಿದು ಬಂದಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳ ಅಗತ್ಯ ಮಾಹಿತಿಯೊಂದಿಗೆ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂ.21 ರಂದು ಸಿಎಂ ಸಿದ್ಧರಾಮಯ್ಯನವರು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಹಿತಿ ಲಭಿಸಿದ್ದು, ಇದಕ್ಕೆ ಪೂರಕವಾಗಿ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಪ್ರಗತಿ ಮಾಹಿತಿ, ಕಾಮಗಾರಿಗಳ ಸ್ಥಿತಿಗತಿ ಹಾಗೂ ಇತರೆ ಸಮಗ್ರ ವಿವರಗಳನ್ನು ಸಿದ್ಧತೆಯಲ್ಲಿಟ್ಟುಕೊಳ್ಳುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles