34.4 C
Bellary
Sunday, April 14, 2024

Localpin

spot_img

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಐದು ಗ್ಯಾರಂಟಿ ಘೋಷಣೆ

ಬೆಳಗಾಯಿತು ವಾರ್ತೆ |www.belagayithu.in
ನವದೆಹಲಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದ ಪ್ರೇರಿತವಾಗಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೂ ಮಹಿಳೆಯರಿಗೆ ಐದು ಗ್ಯಾರಂಟಿಗಳನ್ನು ಬುಧವಾರ ಘೋಷಿಸಿದೆ.
ನಾರಿ ನ್ಯಾಯ ಗ್ಯಾರಂಟಿ‘ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ನೀಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ ಬಡ ಕುಟುಂಬದ ಮಹಿಳೆಗೆ ಕೇಂದ್ರ ಸರ್ಕಾರಿ ಉದ್ಯೋದಗಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ.
ಮಹಾಲಕ್ಷ್ಮಿ” ಗ್ಯಾರಂಟಿ ಯೋಜನೆ ಅಡಿ ದೇಶದ ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ವರ್ಗಾವಣೆ ಮಾಡಲಾಗುವುದು. ಇದಲ್ಲದೆ, “ಆದಿ ಆಬಾದಿ, ಪುರ ಹಕ್” ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ ಶೇಕಡಾ 50 ರಷ್ಟು ಮಹಿಳೆಯರಿಗೆ ಮೀಸಲಿಡಲಾಗುವುದು.
ಶಕ್ತಿ ಕಾ ಸಮ್ಮಾನ್” ಖಾತರಿ ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಹಣವನ್ನು ಡಬಲ್ ಮಾಡಲಾಗುವುದು.
ಅಧಿಕಾರ ಮೈತ್ರಿ” ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.
ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳು” ಗ್ಯಾರಂಟಿ ಯೋಜನೆ ಅಡಿ, ದೇಶದಲ್ಲಿ ಉದ್ಯೋಗದಲ್ಲಿರುವ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles