ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು, ಮಾರ್ಚ್ 2: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್ ಶನಿವಾರ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ. 50 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ ಸೇರ್ಪಡೆಕೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು.