ಬಳ್ಳಾರಿ: ಭಾರತ್ ಜೋಡೋ ಪಾದಯಾತ್ರೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿ.ಎಸ್. ಉಗ್ರಪ್ಪ ಅವರು ಹೇಳಿದರು.
ನಗರದ ಸರ್ಕಾರಿ ವಸತಿ ಗೃಹದಲ್ಲಿ ಗುರು ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರಾಹುಲ್ ಗಾಂಧಿ ಅವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡು ಇಂದಿಗೆ ಒಂದು ವರ್ಷವಾಗಿದೆ.
ಭಾರತದ ಇತಿಹಾಸದಲ್ಲಿ ಗಾಂಧೀಜಿ, ವಿನೋಬಾ ಭಾವೆ ಸೇರಿದಂತೆ ಅನೇಕರು ದೇಶದ ಸಮಸ್ಯೆಗಳನ್ನು ವಿದ್ಯಾಮಾನಗಳನ್ನು ಅರ್ಥೈಸಿಕೊಳ್ಳಲು ಪಾದಯಾತ್ರೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರಾಹುಲ್ ಗಾಂಧಿ ಅವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡು ಇಂದಿಗೆ ಒಂದು ವರ್ಷವಾಗಿದೆ. ಕನ್ಯಾಕುಮಾರಿ ಯಿಂದ ಕಾಶ್ಮೀರ ವರೆಗೆ ಪಾದಯಾತ್ರೆ ಮಾಡಿ ದೇಶದ ವಿವಿಧ ವಿಷಯ ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಜನರಲ್ಲಿ ಸಾಮರಸ್ಯ, ಐಕ್ಯತೆ ಮೂಡಿಸಲು ದೇಶದ ವಿವಿಧ ಆಯಾಮಗಳು ಅರ್ಥ ಮಾಡಿಕೊಳ್ಳಲು ಪಾದಯಾತ್ರೆ ಮಾಡಿದ ಏಕೈಕ ರಾಜಕಾರಣಿ ಅಂದ್ರೆ ರಾಹುಲ್ ಗಾಂಧಿ
ಪಾದಯಾತ್ರೆ ಮೂಲಕ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತ, ಸೌಹಾರ್ದತೆಯನ್ನು ಸಾಮರಸ್ಯ ಮಹಾನ್ ರಾಷ್ಟ್ರ ನಾಯಕನಾಗಿ ಒಬ್ಬ ಸ್ಟೇಟ್ಸ್ ಮನ್ ಆಗಿ ರಾಹುಲ್ ಗಾಂಧಿ ಹೊರ ಹೊಮ್ಮಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆ,ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಮಾರ್ಗದಲ್ಲಿ ರಾಷ್ಟ್ರ ವ್ಯಾಪ್ತಿ ಕಾಂಗ್ರೆಸ್ ಪಕ್ಷ ಸಂಘಟಿತ ವಾಗಿದೆ ಎಂದರು.
ಜನವಿರೋಧಿ ಪ್ರವೃತ್ತಿ ಹೊಂದಿರುವ ಕೇಂದ್ರ ಬಿಜೆಪಿ ಸರ್ಕಾರ ಈ ಸರ್ಕಾರದ ವೈಫಲ್ಯವನ್ನು ಲೋಕಸಭೆಯ ಪಾರ್ಲಿಮೆಂಟ್ ಮತ್ತು ಹೊರಗಡೆ ಜನರಿಗೆ ಮನವರಿಕೆ ಮಾಡಿ ಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ವೆಂಕಟೇಶ್ ಹೆಗ್ಡೆ, ಸಂಗಕಲ್ಲು ವಿಜಯ್ ಕುಮಾರ್ ಸೇರಿದಂತೆ ಮತ್ತಿತರ ಇದ್ದರು.