ಬೆಳಗಾಯಿತು ವಾರ್ತೆ
ಬಳ್ಳಾರಿ : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಗ್ನಿಪಥ್ ಯೋಜನೆ ಜಾರಿ ವಿರೋಧಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತು.
ಕೇಂದ್ರ ರ‍್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ಮಾಡಿದರು.ಕೇಂದ್ರ ಕೂಡಲೇ ಈ ಯೋಜನೆಯನ್ನು ಹಿಂಪಡೆಯಬೇಕು. ಇದರಿಂದ ಸೈನ್ಯಕ್ಕೆ ಸೇರುವ ಯುವಕರಿಗೆ ಅನ್ಯಾಯ ಮಾಡಬೇಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಗ್ರಾಮೀಣ ಶಾಸಕ ಬಿ ನಾಗೇಂದ್ರ ಜಿಲ್ಲಾ ಅಧ್ಯಕ್ಷ ಮಹಮದ್ ರಪೀಕ್. ಮಹಾಪೌರರಾದ ರಾಜೇಶ್ವರಿ ಸುಬ್ಬರಾಯಡು. ಮುಂಡರಗಿ ನಾಗರಾಜ್.ವೆಂಕಟೇಶ್ ಹೆಗ್ಡೆ. ಮನಾಯ್ಯ. ಪಾಲಿಕೆ ಸದಸ್ಯರಾದ ವಿವೇಕ್. ನೋರ್ ಮಹಮದ್.ಮಲ್ಲಂಗಿ ನಂದೀಶ್.ಲೋಕೇಶ್.ಪ್ರಭಾಂಜನ್.ಇನ್ನಿತರೆ ಪಾಲಿಕೆ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.