ಮೀಸಲಾತಿ ಜಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಮಹಿಳೆಯರಿಗೆ ಶೇ.33 ಮೀಸಲಾತಿ ಜಾರಿಗೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದ ಸಂಗಮ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಪೂರ್ವಭಾವಿ ಷರತ್ತುಗಳಿಲ್ಲದೆ ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಮಸೂದೆಯೊಳಗೆ ಇತರ ಹಿಂದುಳಿದ ವರ್ಗಗಳಿಗೆ ಉಪ ಮೀಸಲಾತಿ ಸೇರಿಸುವ ಮೂಲಕ ಸಾಮಾಜಿಕ ನ್ಯಾಯ ಸಾಧಿಸಬೇಕು ಎಂದರು.
2026ರ ಜಾತಿ ಜನಗಣತಿಯ ನಿಖರ ದತ್ತಾಂಶದ ಆಧಾರದ ಮೇಲೆ ಕ್ಷೇತ್ರ ಮರುಹಂಚಿಕೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪ್ರತಿಭಟನೆಯಲ್ಲಿ ಮಹಿಳಾ ಮುಖಂಡರು ಘೋಷಣೆ ಕೂಗಿ ತಕ್ಷಣ ಜಾರಿಗೆ ಒತ್ತಾಯಿಸಿದರು.
ಈ ವೇಳೆ ಹುಮಯೂನ್ ಖಾನ್, ಎಂ.ಎಸ್. ಮಂಜುಳಾ, ಮಾಬೂಸಾಬ್, ಎಲ್. ಮಾರೆಣ್ಣ, ಮಾನಯ್ಯ, ನಾಗು, ಬಿ. ರುದ್ರಪ್ಪ, ಯಶೋಧ, ಗೌಸಿಯ, ಆಶಾಲತಾ, ಸುನಿತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles