ಬೆಳಗಾಯಿತು ವಾರ್ತೆ |Www.belagayithu.in
ಕುರುಗೋಡು: ರಾಜ್ಯದಲ್ಲಿ ಕಾಂಗ್ರೆಸ್ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಂಡೂರು ಉಪ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಕುಡಿತಿನಿ ಪಟ್ಟಣದ ಕಾಂಗ್ರೆಸ್ ಮುಖಂಡ ವಿ.ರಾಜಶೇಖರ್ ವ್ಯಕ್ತಪಡಿಸಿದ್ದಾರೆ.ತಾಲೂಕು ಸಮೀಪದ ಕುಡತಿನಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು ಅವರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಆ ಸಮಯದಲ್ಲಿ ಸುಮಾರು ರೂ. 30 ಕೋಟಿ ಡಿ.ಎಂ.ಎಫ್ ನಿಧಿಯಲ್ಲಿ ರಸ್ತೆ, ಸಿಸಿ ರಸ್ತೆಗಳು, ಚರಂಡಿ ರಾಜಕಾಲುವೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಮತ್ತೆ ಅಭಿವೃದ್ಧಿ ಕಾರ್ಯ ಆರಂಭಿಸಲಾಗುವುದು.
ಈ ಸಂದರ್ಭದಲ್ಲಿ ಸುರೇಶ, ಗಂಗಾಧರ, ಮಂಜು, ರಮೇಶ,ಭೀಮೇಶ್, ಮಾಂತೇಶ್, ಭೀಮಾ, ಜಾಕೀರ್ ಹಾಗೂ ಕಾರ್ಯಕರ್ತರು ಇದ್ದರು.