ಬೆಂಗಳೂರು: ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಹಾಸನ ಹೋಟೆಲ್ ಅಶೋಕದಲ್ಲಿ ಇಂದು ಹಮ್ಮಿಕೊಂಡಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿಗಾಗಿ ಒಳಜಗಳ ಇನ್ನಷ್ಟು ಹೆಚ್ಚಾಗಲಿದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಸಿದ್ರಾಮಣ್ಣನ ಗುಂಪು ಡಿಕೆಶಿ ಗುಂಪನ್ನು ಮತ್ತು ಡಿಕೆಶಿ ಗುಂಪು ಸಿದ್ರಾಮಣ್ಣನ ಅಭ್ಯರ್ಥಿಗಳನ್ನು ಸೋಲಿಸಲಿದ್ದಾರೆ. ಬಿಜೆಪಿ ವಿಕಾಸವಾದದ ಮೂಲಕ ರಾಜ್ಯದಲ್ಲಿ ೧೫೦ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.