ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದೆ. ನಿನ್ನೆ ಒಂದೇ ಒಂದು ದಿನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 7,584 ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,81,982ಕ್ಕೆ ಏರಿಕೆಯಾಗಿದೆ. ಇಂತಹ ಸಂದರ್ಭದಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸದೇ ಮೈಮರೆತರೇ, ಬೆಂಗಳೂರಿನಲ್ಲಿ ಏಪ್ರಿಲ್ 20ರ ನಂತ್ರ ಕೊರೋನಾ ಕರ್ಪ್ಯೂ ಮುಕ್ತಾಯಗೊಂಡ ನಂತ್ರ ಲಾಕ್ ಡೌನ್ ಗ್ಯಾರಂಟಿ ಎನ್ನಲಾಗುತ್ತಿದೆ.
ಹೌದು.. ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಹೀಗೆ ಕೊರೋನಾ ಆರ್ಭಟಿಸುತ್ತಿದ್ದರೂ, ರಾಜಧಾನಿಯ ಜನರು ಕೊರೋನಾ ನಿಯಂತ್ರಣ ಕ್ರಮಗಳ ಪಾಲನೆಯಲ್ಲಿ ಮೈಮರೆತಿದ್ದಾರೆ ಎನ್ನಲಾಗುತ್ತಿದೆ. ಇದರಿಂದಾಗಿ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯತ್ತ ಸಾಗಿದೆ ಎನ್ನಲಾಗಿದೆ. ಇದರ ಮಧ್ಯೆ ಕೊರೋನಾ ನಿಯಂತ್ರಣ ಕ್ರಮಕ್ಕಾಗಿ ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಕೊರೋನಾ ಕರ್ಪ್ಯೂ ಜಾರಿಯಿಂದ ಕೊಂಚ ಕೊರೋನಾ ಸೋಂಕಿನ ಪ್ರಕರಣಗಳ ನಿಯಂತ್ರಣ ಕ್ರಮ ಕೂಡ ಕೈಗೊಂಡಿದೆ.