ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಸತತವಾಗಿ ಮೂರನೇ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಯಲ್ಲಿ 1ಲಕ್ಷದ 31,830 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೊಸ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 1,31,830 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇವರ ಪೈಕಿ 802 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ