ಬೆಂಗಳೂರು– ರಾಜ್ಯದಲ್ಲಿ ಹೊಸದಾಗಿ ಇಂದು 1,875 ಜನರಿಗೆ ಕರೊನ ಸೋಂಕು ತಗುಲಿದ್ದು, ಜೊತೆಗೆ ಚಿಕಿತ್ಸೆ ಫಲಕಾರಿಯಾಗದೇ 25 ರೋಗಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 409, ದಕ್ಷಿಣ ಕನ್ನಡ 410, ಹಾಸನ 108, ಮೈಸೂರು 146, ಕೊಡಗು 83 ಸೇರಿದಂತೆ ರಾಜ್ಯಾದ್ಯಂತ ಇತರೆ ಜಿಲ್ಲೆಗಳಲ್ಲಿ ಒಟ್ಟು 1875 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಹೇಳಿದೆ.
ಇಂದು 1502 ಜನರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ ಇನ್ನೂ ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 409, ದಕ್ಷಿಣ ಕನ್ನಡ 410, ಹಾಸನ 108, ಮೈಸೂರು 146, ಕೊಡಗು 83 ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಒಟ್ಟು 1875 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ ಎಂದೂ ಇಲಾಖೆ ವರದಿ ಹೇಳಿದೆ.