ನವದೆಹಲಿ,ಆ 10 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 28, 204 ಹೊಸ ಕೊರೋನ ಪ್ರಕರಣಗಳು ವರದಿಯಾಗಿದ್ದು ಇದೇ ಅವಧಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 373 ರೋಗಿಗಳು ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಎರಡು ದಿನಗಳಿಂದ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕೊಂಚ ಸಮಾಧಾನಕರ ಸಂಗತಿಯಾಗಿದೆ.
ನಿನ್ನೆ ಒಂದೇ ದಿನ 15ಲಕ್ಷ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಇಲಾಖೆ ವರದಿ ಹೇಳಿದೆ.
ಮೇ ತಿಂಗಳಲ್ಲಿ ಸೋಂಕಿತರ ಸಂಖ್ಯೆ 2ಕೋಟಿ ದಾಟಿದ್ದರೆ, ಜೂನ್ ತಿಂಗಳಲ್ಲಿ ಸೋಂಕಿತರ ಸಂಖ್ಯೆ ಮೂರು ಕೋಟಿಯನ್ನು ದಾಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.ನಿನ್ನೆಯವರೆಗೆ ದೇಶದಲ್ಲಿ ಒಟ್ಟು 48,32,78,545 ಮಾದರಿ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಕರ್ನಾಟಕದಲ್ಲಿ 1,186 ಹೊಸ ಕೊರೋನ ಪ್ರಕರಣಗಳು ಮತ್ತು 24 ಸಾವುಗಳು ವರದಿಯಾಗಿದೆ.