ಮಂಗಳೂರು– ಕೊರೋನ ನಿಯಂತ್ರಿಸಲು ಗಡಿಭಾಗದ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಜಿಲ್ಲಾ ಕೊರೋನ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದರು.
ಕೇಂದ್ರದಿಂದ ಲಭ್ಯವಾಗುವ ಲಸಿಕೆಯನ್ನು ಗಡಿ ಭಾಗದ ಜಿಲ್ಲೆಗಳಿಗೆ ಪೂರೈಕೆ ಮಾಡಲು ಆದ್ಯತೆ ನೀಡಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಪರೀಕ್ಷೆ , ತಪಾಸಣೆ ಹೆಚ್ಚಿಸಬಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು
ಅತಿವೃಷ್ಟಿ ಘೋಷಣೆಯಲ್ಲಿ ಅನ್ಯಾಯ, ತಾರತಮ್ಯ ಎಸಗಲಾಗಿದೆ ಎಂದು ಆಡಳಿತ ಪಕ್ಷದ ಶಾಸಕರೊಬ್ಬರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿರುವುದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಪರಿಹಾರ ಮಾಡಲಾಗುವುದು ಎಂದೂ ಬೊಮ್ಮಾಯಿ ಹೇಳಿದರು.