ಬೆಂಗಳೂರು – ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿಕ್ಕಿನಲ್ಲೂ ಸೈಕ್ಲಿಂಗ್ ಪಥ(ಟ್ರ್ಯಾಕ್) ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾರತೀಯ ಒಲಿಂಪಿಕ್ಸ್ ಸ್ಪೋರ್ಟ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸೈಕ್ಲಾಥಾನ್ ಗೆ ಭಾನುವಾರ ಹಸಿರು ನಿಶಾನೆ ತೋರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಶಿವರಾಮ ಕಾರಂತ ಬಡಾವಣೆಯಲ್ಲಿ ಸೈಕ್ಲಿಂಗ್ ಟ್ರಾಕ್ ನಿರ್ಮಿಸುವಂತೆ ಸಂಸದ ಪಿಸಿ ಮೋಹನ್ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಿವರಾಮ ಕಾರಂತ ಬಡಾವಣೆಯಲ್ಲದೆ, ನಗರದ ನಾಲ್ಕೂ ದಿಕ್ಕಿನಲ್ಲಿ ಸೈಕ್ಲಿಂಗ್ ಪಥ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಸೈಕ್ಲೋಥಾನ್ ಅನ್ನು ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದು, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಬೆಂಗಳೂರು ದಕ್ಷಿಣ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಮಾಜಿ ಆರೋಗ್ಯ ಸಚಿವ ಡಾ ಸುಧಾಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.