ಬೆಳಗಾಯಿತು ವಾರ್ತೆ |Www.belagayithu.in
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 131 ದಿನಗಳ ಬಳಿಕ ದರ್ಶನ್ ಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಇಂದು ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಟ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ನಟ ದರ್ಶನ್ ಅವರ ಅಭಿಮಾನಿಗಳಿಗೆ ಇಂದೇ ದೀಪಾವಳಿ ಹಬ್ಬವಾಗಿದ್ದು, ನಟ ದರ್ಶನ್ ಅವರು ಇಂದು ಸಂಜೆಯೇ ಬಳ್ಳಾರಿ ಜೈಲಿನಿಂದ ದರ್ಶನ್ ಅವರು ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.