ಬೆಳಗಾಯಿತು ವಾರ್ತೆ |Www.belagayithu.in
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಗೆ ನಿರಾಶೆಯಾಗಿದ್ದು ಇವರ ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿದರು. SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ.





