ಬಳ್ಳಾರಿಯಲ್ಲಿ ಸ್ವೀಪ್ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಚಾಲನೆ

ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ, ಜು.2: ಬಳ್ಳಾರಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)’ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾರ ಸ್ವೀಪ್ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು.
ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.
ಬಳಿಕ ಜಿಲ್ಲಾಡಳಿತ ಭವನದಿಂದ ಆರಂಭವಾದ ರ‍್ಯಾಲಿಯು ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ ಮಾರ್ಗವಾಗಿ ಸಂಚರಿಸಿ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಮಾಪ್ತಿಯಾಯಿತು.
ರ‍್ಯಾಲಿಯ ಮೂಲಕ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಅರ್ಹರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವುದು, ತಿದ್ದುಪಡಿ ಮಾಡಿಸಿಕೊಳ್ಳುವುದು ಹಾಗೂ ಮತದಾನದ ಹಕ್ಕಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ವೀಪ್ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles