ಬಳ್ಳಾರಿ: ನೇರ ಪಾವತಿ, ಪೌರಕಾರ್ಮಿಕರು,ಕುಸಿದು ವಾಹನ ಚಾಲಕರು ಒಳ ಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕ್ಲಿನರ್ಸ್ ಮತ್ತು ಸಹಾಯಕರನ್ನು ಕೂಡಲೇ ಖಾಯಂ ಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಡಿ.1ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾನತೆ ಯೂನಿಯನ್ -ಕರ್ನಾಟಕದ ರಾಜ್ಯ ಸಂಚಾಲಕರಾದ ರಾಮಚಂದ್ರ ಅವರು ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಇತರೆ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಘೋಷಿಸಿತ್ತು. ಆದರೆ ಇದು ವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಆದ್ದರಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಡಿ.1ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರತ್ನಮ್ಮ, ಉಪಾಧ್ಯಕ್ಷರಾದ ಕಾಳಿ ಪ್ರಸಾದ್ ಅವರು ಉಪಸ್ಥಿತರಿದ್ದರು.