ಸರ್ಕಾರ ತಕ್ಷಣವೇ ರೈತರಿಗಾದ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹ

ಬೆಳಗಾಯಿತು ವಾರ್ತೆ| www.belagayithu.in

ಕುಡುತಿನಿ: ರೈತರಿಗಾದ ಅನ್ಯಾಯವನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (KPRS) ರಾಜ್ಯ ಸಮಿತಿ ವತಿಯಿಂದ ಕುಡುತಿನಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷ ಸಿ. ಆನಂದ್ ಕುಮಾರ್ ಮಾತನಾಡಿ, Karnataka Industrial Areas Development Board (ಕೆಐಎಡಿಬಿ) ಹಾಗೂ Jindal Steel and Power ಕಂಪನಿಗಳ ನಡುವಿನ ಕಾನೂನುಬಾಹಿರ ರಿಯಲ್ ಎಸ್ಟೇಟ್ ವ್ಯವಹಾರವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಸುಪ್ರೀಂ ಕೋರ್ಟ್ ತೀರ್ಪಿನಂತೆ ರೈತರಿಗೆ ಪರಿಹಾರ ನೀಡಬೇಕು, ಇಲ್ಲವೇ ಅವರ ಭೂಮಿಯನ್ನು ಹಿಂತಿರುಗಿಸಬೇಕು ಎಂದು ಹೇಳಿದರು.
ಬಂಧಿತ ರೈತ ಮುಖಂಡರು ಹಾಗೂ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಹೋರಾಟ ನಿರತರೊಂದಿಗೆ ತಕ್ಷಣ ಮಾತುಕತೆ ನಡೆಸಿ ಸೂಕ್ತ ಪರಿಹಾರ ರೂಪಿಸಬೇಕು ಎಂದು ಆಗ್ರಹಿಸಿದರು. ಪ್ರಜಾ ಪರಿವರ್ತನಾ ವೇದಿಕೆ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ತಿಳಿಸಿದರು.
ರಾಜ್ಯ ಸರ್ಕಾರವು ಪೊಲೀಸ್ ಬಲದ ಮೂಲಕ ಹೋರಾಟವನ್ನು ದಮನಿಸುವುದನ್ನು ಮುಂದುವರೆಸಿದರೆ, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯ ವೇಳೆ ಭಾರೀ ಸಂಖ್ಯೆಯಲ್ಲಿ ಪೊಲೀಸರು ನಿಯೋಜನೆಗೊಂಡಿದ್ದು, ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದ ಘಟನೆ ನಡೆಯಿತು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles