ಬಳ್ಳಾರಿ: ನಗರದಲ್ಲಿನ ರಾಯಲ್ ವೃತ್ತದಲ್ಲಿ ಗುರುವಾರ
ಗಂಗಾವತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆನೆ ಗುಂದಿಯಲ್ಲಿ ಪಂಪಾ ಸರೋವರದಲ್ಲಿನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಗಾಲಿ ಜನಾರ್ದನ ರೆಡ್ಡಿ ಅವರು
ಕುಟೀರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಖಂಡಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಅಧ್ಯಕ್ಷರಾದ ದಮ್ಮೂರು ಶೇಖರ್ ಅವರು ಮಾತನಾಡಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆನೆ ಗುಂದಿಯಲ್ಲಿ ಪಂಪಾ ಸರೋವರದಲ್ಲಿನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಗಾಲಿ ಜನಾರ್ದನ ರೆಡ್ಡಿ ಅವರು ಕುಟೀರಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಶಿಕ್ಷೆ ವಿಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆನೆಗುಂದಿ ಅಭಿವೃದ್ಧಿ, ಅಂಜನಾದ್ರಿಯ ಅಭಿವೃದ್ಧಿ,ಹನುಮ ಮಾಲೆ ದಾರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶ್ರಮಿಸಿದ ಜನಾರ್ಧನ ರೆಡ್ಡಿ ಅವರನ್ನು ಸಹಿಸದವರು ಇಂತಹ ಕೃತ್ಯಕ್ಕೆ ಮುಂದಾಗಿದ್ದಾರೆ ಅಂತಹ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೆ.ಎಸ್ . ದಿವಾಕರ್, ದರಪ್ಪ ನಾಯಕ, ಮುನ್ನಾಭಾಯಿ, ಹಂಪಿ ರಮಣ, ರಾಜೇಶ್ ಹುಂಡೇಕರ್, ಮಲ್ಲಿಕಾರ್ಜುನ ಆಚಾರಿ,ಗಡ್ಡಂ ತಿಮ್ಮಪ್ಪ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.