ಬೆಂಗಳೂರು: ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಸಚಿವರಾಗಿದ್ದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ನಾಯಕ ಎಂ.ರಘುಪತಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ನರಳುತ್ತಿದ್ದ ಅವರು ಇಂದು ಮುಂಜಾನೆ 3 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂ ನಿವಾಸದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂ. ರಘುಪತಿ ಅವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.
ಜನಪ್ರಿಯ ನಾಯಕರು, ಮಾಜಿ ಸಚಿವ ಶ್ರೀ ಎಂ.ರಘುಪತಿ ಅವರ ನಿಧನದಿಂದ ತೀವ್ರ ನೋವಾಗಿದೆ. ರಾಜ್ಯ ರಾಜಕಾರಣದೊಂದಿಗೆ ರಾಷ್ಟ್ರ ರಾಜಕಾರಣದಲ್ಲೂ ಅವರು ಹೆಸರು ಗಳಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಈ ದುಃಖ ಸಹಿಸುವ ಶಕ್ತಿಯನ್ನು ದೇವರು ಅವರ ಬಂಧು, ಬಳಗಕ್ಕೆ ಕರುಣಿಸಲಿ. ಓಂ ಶಾಂತಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.