ಬೆಳಗಾಯಿತು ವಾರ್ತೆ
ಬಳ್ಳಾರಿ : ನಗರದ ತಾಳೂರು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಉದ್ಘಾಟನಾ ಸಮಾರಂಭವನ್ನು ಬಾನುವಾರ ಆಯೋಜಿಸಲಾಯಿತು. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆಯನ್ನು ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ಥಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆ. ಎರ್ರಿಗೌಡ ಅಧ್ಯಕ್ಷರು ಬಳ್ಳಾರಿ ವಕೀಲರ ಸಂಘ. ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೆ ನಟರಾಜನ್. ಬಳ್ಳಾರಿ ಜಿಲ್ಲಾ ನ್ಯಾಯಾಧೀಶೆ ಎಸ್ ಹೆಚ್ ಪುಷ್ಪಾಂಜಲಿ ದೇವಿ. ಸೇರಿದಂತೆ ವಿವಿಧ ಜಿಲ್ಲೆಯ ನ್ಯಾಯಾಲಯಗಳ ನ್ಯಾಯಾಧೀಶರು ನ್ಯಾಯವಾದಿ ಕೋಟೇಶ್ವರ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು