ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ಇದನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸೋಮವಾರದಂದು ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಆದರೆ ಸರ್ಕಾರ ಯಾಕೆ ಇಷ್ಟು ಚಿಂತಿತವಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
“ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಭಾಗುವ ನಾಗರೀಕರು. ಬೆಂಗಳೂರಿನ ವಿದ್ಯಾರ್ಥಿಗಳು ದೇಶಕ್ಕೆ ಕೀರ್ತಿ ತರುವಂತಹ ಪ್ರತಿಭಾವಂತರು. ಅವರ ವ್ಯಾಸಂಗಕ್ಕೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ನಮ್ಮ ವಿದ್ಯಾರ್ಥಿಗಳನ್ನು ಅವರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು”
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್