ನವದೆಹಲಿ– ಜನರು ಕೊರೋನ ಲಸಿಕೆಯ ಭಯ, ಆತಂಕದಿಂದ ಹೊರಬರಬೇಕು ಕೊರೋನ ಸೋಂಕು ಇನ್ನೂ ಸಂಪೂರ್ಣ ಹೋಗಿಲ್ಲ ಹೀಗಾಗಿ ಹಬ್ಬಗಳ ಸಂದರ್ಭದಲ್ಲಿ ಜನತೆ ಕೋವಿಡ್ ನಿಯಮ ಮರೆಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಕಾಶವಾಣಿಯ ಜನಪ್ರಿಯ ಮನದ ಮಾತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಲಸಿಕೆ ಹಾಕಿಸಿಕೊಳ್ಳುವುದನ್ನು ನಿರಾಕರಿಸಿವುದು ಬಹಳ ಅಪಾಯಕಾರಿ ಸಂಗತಿ ಎಂದು ಹೇಳಿದರು.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ನೀವು ಸ್ಪೂರ್ತಿ ತುಂಬಿ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಜನರಿಗೆ ಕರೆ ನೀಡಿದರು.
ಈ ಬಾರಿ ಆಗಸ್ಟ್ 15ರಂದು ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವವನ್ನು ದೇಶ ಆಚರಣೆ ಮಾಡುತ್ತಿದೆ. ದೇಶದ ವಿವಿಧ ಭಾಗದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 15ರಂದು ಎಷ್ಟು ಜನರು ಸಾಧ್ಯವೋ ಅಷ್ಟು ಜನರು ಸೇರಿಕೊಂಡು ರಾಷ್ಟ್ರಗೀತೆಯನ್ನು ಹಾಡುವ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು.