ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾನುವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಮಾಜಿ ಉಪ ಪ್ರಧಾನಿಯಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಮಹಾಪೌರರಾದ ಪಿ. ಗಾದೆಪ್ಪ ಅವರು ಉದ್ಘಾಟಿಸಿ, ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಬುಜಿ ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೆ ಸಮಾಜ ಸೇವಕರಾಗಿಯೂ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದರು. ಜೊತೆಗೆ ಮೂರಾರ್ಜಿ ದೇಸಾಯಿ ಅವರ ಆಡಳಿತಾವಧಿಯಲ್ಲಿ ಉಪ ಪ್ರಧಾನಿಯಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಕಲ್ಲುಕಂಭ ಪಂಪಾಪತಿ, ಕಾರ್ಯಾಧ್ಯಕ್ಷರಾದ ಭೋಯಾಪಾಟಿ ವಿಷ್ಣುವರ್ಧನ್, ಡಿಸಿಸಿ ಕಾರ್ಯಾಧ್ಯಕ್ಷ ಕೆ. ಶ್ರೀನಿವಾಸುಲು, ಕಾರ್ಯಕಾರಿಣಿ ಸದಸ್ಯರಾದ ವೆಂಕಟಲಕ್ಷ್ಮಿ ನಾರಾಯಣ, ಎಲ್. ಮಾರೆಣ್ಣ, ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಹಾಗೂ ವಕ್ತಾರ ವೆಂಕಟೇಶ್ ಹೆಗಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದೇ ವೇಳೆ ಮುಂಚೂಣಿ ಘಟಕಗಳ ಅಧ್ಯಕ್ಷರು, ಪಾಲಿಕೆ ಸದಸ್ಯ ಮಿಂಚು ಶ್ರೀನಿವಾಸ್, ಹಾಗೂ ಕಾರ್ಯಕರ್ತರಾದ ತಿಮ್ಮಪ್ಪ ಗೌಡ, ಎರ್ರಿಸ್ವಾಮಿ, ಹೊನ್ನೂರು ಸ್ವಾಮಿ, ಪ್ರತಾಪ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles