ಡಾ. ರಾಜಕುಮಾರ್ ಜಯಂತಿ ಆಚರಣೆ: ರಾಜ್ಯಕ್ಕೆ ಅವರ ಸೇವೆ ಅಮೂಲ್ಯ


ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಡಾ. ರಾಜಕುಮಾರ್ ಅವರ ಸೇವೆ ರಾಜ್ಯಕ್ಕೆ ಗಣನೀಯವಾಗಿದ್ದು, ಅವರ ಸಾಧನೆಗಳು ಎಲ್ಲರಿಗೂ ಪ್ರೇರಣೆಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ಹೇಳಿದರು.
ನಗರದ ಡಾ. ರಾಜಕುಮಾರ್ ಪಾರ್ಕ್ ನಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಡಾ. ರಾಜಕುಮಾರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು, ಡಾ. ರಾಜಕುಮಾರ್ ಅವರು ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಜೀವನ ಮೌಲ್ಯಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಡ್ರಗಿ ನಾಗರಾಜ್, ಎಸಿ ರಾಜೇಶ್ ಎಚ್.ಡಿ, ಪನ್ನರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಹಾಜರಿದ್ದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles