ಡಾ. ರಾಜಕುಮಾರ್ ಜೀವನವೇ ಒಂದು ವಿಶ್ವವಿದ್ಯಾಲಯ: ಮೇಯರ್ ಗಾದೆಪ್ಪ ಅಭಿಮತ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಡಾ. ರಾಜಕುಮಾರ್ ಅವರ ಜೀವನವೇ ಒಂದು ವಿಶ್ವವಿದ್ಯಾಲಯದಂತಿದ್ದು, ಅವರ ಚಿತ್ರಗಳನ್ನು ನೋಡಿ ಜೀವನ ಪಾಠಗಳನ್ನು ಕಲಿಯಬಹುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಹೇಳಿದರು.
ನಗರದ ಡಾ. ರಾಜಕುಮಾರ್ ರಸ್ತೆಯ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ವತಿಯಿಂದ ಆಯೋಜಿಸಿದ್ದ ಡಾ. ರಾಜಕುಮಾರ್ 98ನೇ ಜಯಂತಿ ಕಾರ್ಯಕ್ರಮದಲ್ಲಿ ‘ವೀರ ಕನ್ನಡಿಗ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. “ನಾನು ಡಾ. ರಾಜಕುಮಾರ್ ಅವರ ದೊಡ್ಡ ಅಭಿಮಾನಿ. ಅವರ ಜೀವನದಲ್ಲಿ ಕಲಿಯಬೇಕಾದದ್ದು ಅಪಾರವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಾಂಧಿನಗರ ಸರ್ಕಲ್ ಇನ್ಸ್ಪೆಕ್ಟರ್ ರವಿ ಚಂದನ್, “ನಾನು ಸಹ ಡಾ. ರಾಜ್ ಅಭಿಮಾನಿ. ಅವರ ಜೀವನ ಚರಿತ್ರೆ ಹಾಗೂ ಚಿತ್ರಗಳ ಪ್ರಭಾವದಿಂದಲೇ ನಾನು ಇಂದು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಎಲ್ಲರೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರವೇ ಕಾವಲುಪಡೆಯ ರಾಜ್ಯಾಧ್ಯಕ್ಷ ಸುರೇಶ್ ಮಾತನಾಡಿ, “ಡಾ. ರಾಜಕುಮಾರ್ ಕೇವಲ ಚಿತ್ರನಟರಲ್ಲ, ಕನ್ನಡದ ಆಸ್ಮಿತೆಯ ಪ್ರತೀಕ. ಅವರು ನಿರ್ವಹಿಸದ ಪಾತ್ರವೇ ಇಲ್ಲ ಎಂಬಂತೆ ಕನ್ನಡ ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಾಗರ್ ಅಪ್ಪು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles