ದಸರಾ ಕ್ರೀಡಾಕೂಟ: ರಾಜ್ಯಮಟ್ಟಕ್ಕೆ ಬಳ್ಳಾರಿಯ ಕುಶಾಲ್ ಆರ್.ಎಸ್. ಆಯ್ಕೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಮೋಕಾ ರಸ್ತೆಯಲ್ಲಿರುವ ವಿಸ್ಡಮ್ ಲ್ಯಾಂಡ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಕುಶಾಲ್ ಆರ್.ಎಸ್. ಅವರು ಟೇಬಲ್ ಟೆನ್ನಿಸ್ ಕ್ರೀಡೆಯಲ್ಲಿ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕಲಬುರಗಿ ವಿಭಾಗದಿಂದ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕುಶಾಲ್ ಅವರು ರಾಜ್ಯಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ಮೈಸೂರಿನಲ್ಲಿ ಅಕ್ಟೋಬರ್ 11ರಿಂದ 14ರವರೆಗೆ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅವರು ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಕುಶಾಲ್ ಅವರು ತರಬೇತುದಾರ ಚೈತನ್ಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಟೇಬಲ್ ಟೆನ್ನಿಸ್ ಅಭ್ಯಾಸ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡಿರುವ ಅವರು, ವಿಭಾಗ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಕ್ರೀಡಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳು ಕುಶಾಲ್ ಅವರಿಗೆ ಶುಭ ಹಾರೈಸಿದ್ದಾರೆ.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles