ದಸರಾ ಕ್ರೀಡಾಕೂಟ ಆಯೋಜನೆ

ಬೆಳಗಾಯಿತು ವಾರ್ತೆ |Www.belagayithu.in
ಬಳ್ಳಾರಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟ:ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.26 ರಂದು ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್‌ಬಾಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ತಾಲ್ಲೂಕು ಮಟ್ಟ: ಕಂಪ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸೆ.20 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ಕುರುಗೋಡಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸೆ.21 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಿರುಗುಪ್ಪದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ಸಂಡೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆ.24 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.25 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ನಿರ್ದೇಶನಗಳು: ಕ್ರೀಡಾಕೂಟದಲ್ಲಿ ಆಯಾ ತಾಲ್ಲೂಕಿನ ಪುರಷ ಮತ್ತು ಮಹಿಳಾ ಕ್ರೀಡಾಪಟುಗಳು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್(ಪುರಷರಿಗೆ ಮಾತ್ರ), ಥ್ರೋಬಾಲ್,  ಯೋಗ ಕ್ರೀಡೆಗಳಲ್ಲಿ ಭಾಗವಹಿಸಬಹುದು.
ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ  ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ.
ಹೆಚ್ಚಿನ ವಿವರಗಳಿಗಾಗಿ ಹಾಕಿ ತರಬೇತುದಾರ ಎಂ.ಜಾಕೀರ್ ಮೊ: 9036335986, ಅಥ್ಲೆಟಿಕ್ ತರಬೇತುದಾರೆ ರೋಹಿಣಿ ರ‍್ವತ್‌ಕರ್, ಮೊ: 8217324522, ಬ್ಯಾಡ್ಮಿಂಟನ್ ತರಬೇತುದಾರ ಜಿ.ರವಿ ಮೊ:9739852460, ಫುಟ್ಬಾಲ್ ತರಬೇತುದಾರರು ಮಹ್ಮದ್ ಮಸೂದ್ ಮೊ:9886688858, ಬಾಸ್ಕೆಟ್ ಬಾಲ್ ತರಬೇತುದಾರ ನಿಸಾರ್ ಅಹ್ಮದ್ ಮೊ:8088380909 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles