ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ

ಬೆಳಗಾಯಿತು ವಾರ್ತೆ |www.belagayithu.in

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಡೂರು ಶಾಸಕ ಈ. ತುಕಾರಾಂ ಅವರು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದು. ಈ ಕುರಿತು ಪಕ್ಷದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.
ಹೈ ವೋಲ್ಟೇಜ್ ಕ್ಷೇತ್ರವಾದ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಮಗಳಿಗೆ ಟಿಕೆಟ್ ನೀಡುವಂತೆ ಸಂಡೂರಿನ ಶಾಸಕ ಈ.ತುಕರಾಂ ಅವರು ಪ್ರಯತ್ನಿಸಿದರು ಆದರೆ ಪಕ್ಷದ ಹೈಕಮಾಂಡ್ ತುಕಾರಾಂ ಅವರೇ ಸ್ಪರ್ಧಿಸುವಂತೆ ಸಲಹೆ ನೀಡಿದ ಹಿನ್ನೆಲೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಂಸದ ಉಗ್ರಪ್ಪ, ಮುಖಂಡರಾದ ಸಚಿವ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಶಾಸಕ ತುಕಾರಾಂ ಪುತ್ರಿ ಸೌಪರ್ಣಿಕಾ, ಗುಜ್ಜಲ ನಾಗರಾಜ್ ಅವರು ಪ್ರಯತ್ನಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles