ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ, ಫೆಬ್ರವರಿ 10: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಫೆ.10) ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.