31.4 C
Bellary
Friday, May 10, 2024

Localpin

spot_img

ಶಾಸಕ ಭರತ್ ರೆಡ್ಡಿ ಮನೆ, ಕಚೇರಿ ಮೇಲೆ ಇಡಿ ದಾಳಿ: 31 ಲಕ್ಷ ವಶ

ಬೆಳಗಾಯಿತು ವಾರ್ತೆ | www.belagayithu.in

ಬಳ್ಳಾರಿ: ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ ಸಿಗದ 31 ಲಕ್ಷ ಹಣ ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ತಿಳಿಸಿದೆ.
ಇ.ಡಿ ಅಧಿಕಾರಿಗಳ ತಂಡ ಕಳೆದ ಶನಿವಾರ (ಫೆ.10) ನಾರಾ ಭರತ್ ರೆಡ್ಡಿ, ಅವರ ತಂದೆ ಮಾಜಿ ಶಾಸಕ ಸೂರ್ಯ ನಾರಾಯಣ ರೆಡ್ಡಿ ಮತ್ತು ಸಂಬಂಧಿಗಳ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ಇ.ಡಿ ಅಧಿಕಾರಿಗಳ ಶೋಧ ಕಾರ್ಯವು ಭಾನುವಾರ ರಾತ್ರಿ 11.30ಕ್ಕೆ ಅಂತ್ಯಗೊಂಡಿತ್ತು.
ಬಳ್ಳಾರಿಯ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ವೊಂದರ ಆಧಾರದ ಮೇಲೆ ತನಿಖೆ ನಡೆಸುತ್ತಿರುವುದಾಗಿ ಇ.ಡಿ ಮಂಗಳವಾರ ಮಾಹಿತಿ ಹಂಚಿಕೊಂಡಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles