ಬೆಳಗಾಯಿತು ವಾರ್ತೆ | Www.belagayithu.in
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ ಅವರ ಸುಮಾರು 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ, ಒಂದು ಕಟ್ಟಡ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಸೆಕ್ಷನ್ಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಈ ಆಸ್ತಿಗಳನ್ನು PMLA ಅಡಿಯಲ್ಲಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.
ಜಾರಿ ನಿರ್ದೇಶನಾಲಯದ ಪ್ರಕಾರ, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಆಗಿದೆ.





