ಬೆಳಗಾಯಿತು ವಾರ್ತೆ
ಬಳ್ಳಾರಿ: ಇತ್ತೀಚೆಗೆ ಬ್ಯಾಟರಿ ಚಾಲಿತ ಬೈಕ್, ಕಾರ್ ಮತ್ತು ಆಟೋಗಳು ಹೆಚ್ಚು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಜನರಿಗೆ ಆಕರ್ಷಣೆ ಉಂಟುಮಾಡುತ್ತಿದೆ.
ಆದರೆ ಇವು ಎಷ್ಟು ಸುರಕ್ಷಿತ ಎಂಬುವುದು ಸಾರ್ವಜನಿಕರಿಗೆ ತಿಳಿಯಬೇಕಾಗಿದೆ.
ಹೌದು ಬಳ್ಳಾರಿ ನಗರದ ಹೊರವಲಯದಲ್ಲಿ ವಿದ್ಯುತ್ ಚಾಲಿತ ಆಟೋ ಒಂದು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆ ಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಲಿಸುತ್ತಿದ್ದ ಆಟೋಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದು ಹೋದ ಘಟನೆ ಸೋಮವಾರ ನಡೆದಿದೆ.
ಏಕಾಏಕಿ ಬ್ಯಾಟರಿ ಚಾಲಿತ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಆಟೋ ಸಂಪೂರ್ಣ ಹೊತ್ತಿ ಉರಿದಿದೆ.
ಪ್ರಕರಣ ಬಳ್ಳಾರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.