ಬೆಳಗಾಯಿತು ವಾರ್ತೆ
ಬಳ್ಳಾರಿ: ತುರ್ತು ಪರಿಸ್ಥಿತಿಯಲ್ಲಿ ಅನೇಕ ಮಹನೀಯರು ಜೈಲಿಗೆ ಹೋಗಿ ನಮಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಅವರು ಜೈಲಿನಲ್ಲಿ ಸೇರೆವಾಸ, ಕಷ್ಟಗಳನ್ನು ಅನುಭವಿಸಿದ್ದಾರೆ. ಅಂತಹ ವ್ಯಕ್ತಿಗಳನ್ನ ಇಂದು ನಮ್ಮ ಬಿಜೆಪಿ ಪಕ್ಷದ ವತಿಯಿಂದ ಸನ್ಮಾನ ಮಾಡುವ ಕೆಲಸ ಮಾಡಲಾಗಿದೆ ಎಂದು ಸಾರಿಗೆ ಸಚಿವರದ ಬಿ. ಶ್ರೀರಾಮುಲು ಅವರು ಹೇಳಿದರು.
ನಗರದ ಎಸ್ಪಿ ವೃತ್ತದಲ್ಲಿ ಇರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಅವರು ಟೀಕಿಸಿ ಮಾತನಾಡಿದರು.
ಭಾರತ ದೇಶಕ್ಕೆ ಕರಾಳ ದಿನ ಅಂದ್ರೆ ಅದು ತುರ್ತು ಪರಿಸ್ಥಿತಿಯಾಗಿದೆ. ಆ ತುರ್ತು ಪರಿಸ್ಥಿತಿ ದಿನಕ್ಕೆ ಇಂದಿಗೆ 45 ವರ್ಷ ತುಂಬಿದೆ.
ತುರ್ತು ಪರಿಸ್ಥಿತಿಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಬಿಜೆಪಿ ಮುಖಂಡರನ್ನ ಜೈಲಿಗೆ ಹಾಕಲಾಗಿತ್ತು. ಆದರೆ ಇಂದು ಎಲ್ಲರ ಶಾಪದಿಂದ ಕಾಂಗ್ರೆಸ್ ಪಕ್ಷ ನಿರ್ನಾಮ ಹಂತಕ್ಕೆ ಬಂದಿದೆ. ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ತನ್ನ ಹಿಡಿತವನ್ನು ಸಾದಿಸುತ್ತಿದೆ. ನಾವೇಲ್ಲರೂ ದೇಶ ಉಳಿಸುವ ಉದ್ದೇಶ ದಿಂದ ಪಕ್ಷವನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು.
ನAತರ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ಜನರು ಪಟ್ಟ ಕಷ್ಟಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶ ಇಂದು ಕರಾಳ ದಿನವನ್ನು ಆಚರಿಸಲಾಗುತ್ತಿದೆ. ಇಂದು ಕಾಂಗ್ರೆಸ್ ನವರ ದಬ್ಬಾಳಿಕೆಯನ್ನು ಜನರು ನೋಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸಾರ್ವಜನಿಕರಿಗೆ ಬಹಳ ಕಷ್ಟದ ಪರಿಸ್ಥಿತಿ ಬರುತ್ತದೆ.
ಅಂದು ನಮ್ಮ ಕಾರ್ಯಕರ್ತರು ಬಹಳ ಕಷ್ಟ ಪಟ್ಟು ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಮತ್ತೋಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಪಡೋಣ ಎಂದರು.
ಇದೇ ಸಂದರ್ಭದಲ್ಲಿ ರಾಬಾಕೊ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವೈ. ಎಂ. ಸತೀಶ್, ಸಂಸದ ದೇವೆಂದ್ರಪ್ಪ,
ಜಿಲ್ಲಾಧ್ಯಕ್ಷ ಮುರಹರಿ ಗೌಡ, ಬುಡ ಅಧ್ಯಕ್ಷರಾದ ಪಿ. ಪಾಲಣ್ಣ, ಶ್ರೀನಿವಾಸ ಮೋತ್ಕರ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹನುಮಂತಪ್ಪ, ಎಪಿಎಂಸಿ ಅಧ್ಯಕ್ಷರಾದ ಉಮೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.