ಬೆಳಗಾಯಿತು ವಾರ್ತೆ |www.belagayithu.in
ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಹಿತಿ ಹಂಚಿಕೊಂಡಿದ್ದಾರೆ.