ವಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ವೃದ್ಧೆಯ ಸಾವಿಗೆ ಕುಟುಂಬಸ್ಥರ ಆಕ್ರೋಶ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದರೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಅಕ್ಕಮ್ಮ ಎಂಬ ವೃದ್ಧೆಯನ್ನು ಬಾಯಿಯ ಕ್ಯಾನ್ಸರ್ ಸಮಸ್ಯೆಯಿಂದ ಏಪ್ರಿಲ್ 9ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಏಪ್ರಿಲ್ 17ರಂದು ಶಸ್ತ್ರಚಿಕಿತ್ಸೆ (ಆಪರೇಷನ್) ನಡೆಸಲಾಗಿದ್ದು, ವೈದ್ಯರು ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದರು ಎಂದು ತಿಳಿದುಬಂದಿದೆ.
ಆದರೆ ಶಸ್ತ್ರಚಿಕಿತ್ಸೆಯ ಬಳಿಕ ಸೂಕ್ತವಾದ ನಂತರದ ಚಿಕಿತ್ಸೆ (ಪೋಸ್ಟ್‌ ಆಪರೇಟಿವ್ ಕೇರ್) ನೀಡಲಾಗಲಿಲ್ಲ ಎಂಬುದು ಕುಟುಂಬಸ್ಥರ ಆರೋಪವಾಗಿದೆ. ಸಮಯಕ್ಕೆ ನೀಡಬೇಕಾದ ಇಂಜೆಕ್ಷನ್‌ಗಳು, ಟ್ಯಾಬ್ಲೆಟ್‌ಗಳು ಸೇರಿದಂತೆ ಅಗತ್ಯ ಚಿಕಿತ್ಸೆ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ಹೇಳಿದ್ದಾರೆ.
“ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ಅಕ್ಕಮ್ಮ ಬದುಕುತ್ತಿದ್ದರು. ಆದರೆ ಸಿಬ್ಬಂದಿಯ ಎಡವಟ್ಟಿನಿಂದಲೇ ಅವರ ಸಾವು ಸಂಭವಿಸಿದೆ,” ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles