ನವದೆಹಲಿ – ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಆರಂಭಿಸುವುದಕ್ಕೆ ಮುನ್ನವೇ ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಮಂಗಳವಾರ, ದೆಹಲಿ ಸರ್ಕಾರ ಮತ್ತು ಪೊಲೀಸರು ಜುಲೈ 22 ರಿಂದ ಆಗಸ್ಟ್ 9 ರವರೆಗೆ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯ ನಡುವೆ ಐತಿಹಾಸಿಕ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಅನುಮತಿ ನೀಡಿದರು.
ಆದಾಗ್ಯೂ, ಅಧಿಕಾರಿಗಳು ಪ್ರತಿಭಟನಾಕಾರರ ಅನುಮತಿ ಮಿತಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಎಸ್‌ಕೆಎಂ ಗೆ 200 ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಕೆಎಂಎಸ್‌ಸಿ ಗೆ ಆರು ಎಂದು ಗುರುತಿಸಿದ್ದಾರೆ. ಮುಂಗಾರು ಅಧಿವೇಶನ ನಡೆಯುತ್ತಿರುವ ಸಂಸತ್ತು ಮತ್ತು ಜಂತರ್ ಮಂತರ್ ಹಾಗೂ ಸುತ್ತಲಿನ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.