ಬೆಳಗಾಯಿತು ವಾರ್ತೆ|www.belagayithu.in
ವಿಜಯನಗರ: ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಹೊಸಪೇಟೆಯ ಟಿಬಿ ಡ್ಯಾಂ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಾಗುತ್ತಿದ್ದ ಟ್ರಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಲಾರಿ ಹಾಗೂ ಟ್ರಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿವೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಹತ್ತು ಜನರು ಮೃತಪಟ್ಟಿದ್ದು, ಹಲವು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಪೊಲೀಸರು ಹಾಗೂ ಸಾರ್ವಜನಿಕರ ಸಹಾಯದಿಂದ ಅಂಬ್ಯುಲೇನ್ಸ್ ಮೂಲಕ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.





